Politics

*ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕರಿಗೆ ಹಸುಗಳನ್ನು ಕೊಡಿಸಿದ ಸಚಿವ ಜಮೀರ್ ಅಹ್ಮದ್*

ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ಅಮಾನುಷವಾಗಿ ನಡೆದುಕೊಂಡಿದ್ದರು. ಗೋಮಾತೆಯಾದ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಘಟನೆಗೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಪ್ರಕರನ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಘಟನೆಗಳ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಹಸುವಿನ ಮಾಲೀಕರಿಗೆ ಮೂರು ಹಸುಗಳನ್ನು ಕೊಡಿಸಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸು ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಇಂದು ಮೂರು ಹಸುಗಳನ್ನು ನೀಡಿದರು. ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸುಗಳನ್ನು ಖರೀದಿಸಿ ಸಚಿವರು ಕುಟುಂಬದವರಿಗೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅಮುದಾ, ನನ್ನ ಸಹೋದರ ಹಸು ನಿರಾಕರಿಸಿದ್ದಾನೆ. ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ನಾವು ಶಾಸಕರ ಜತೆ ಇದ್ದೇವೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button