Latest

ಗೋಹತ್ಯೆ ನಿಷೇಧ ಕಾಯಿದೆಯನ್ನು ಅಂಗೀಕರಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ಧನ್ಯವಾದ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರವು 33 ಕೋಟಿ ದೇವತೆಗಳ ವಾಸಸ್ಥಾನವಾಗಿರುವ ಗೋಹತ್ಯೆಯನ್ನು ತಡೆಯಲು ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೆಯಕ-2020’ ಧಾನಸಭೆಯಲ್ಲಿ ಅಂಗಿಕಾರ ಪಡೆದಿದೆ. ಅದಕ್ಕಾಗಿ ಹಿಂದೂ ಜನಜಾಗೃತಿ ಸಮಿತಿ ಮತ್ತು ಸಮಸ್ತ ಹಿಂದೂ ಸಂಘಟನೆಗಳ ವತಿಯಿಂದ ಧನ್ಯವಾದಗಳು.

ಈ ವಿಧೆಯಕವು ರಾಜ್ಯದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಗೋಹತ್ಯೆ, ಗೋಸಾಗಾಟ ತಡೆಯಲು ಸಹಕಾರಿಯಾಗಲಿದೆ. ಇಡೀ ದೇಶದಲ್ಲಿ ಗೋಹತ್ಯೆ ನಿಷೇಧ ಕಾಯಿದೆಯು ಅತ್ಯಂತ ಅವಶ್ಯಕತೆ ಇತ್ತು. ಈ ಹಿಂದೆ ಕರ್ನಾಟಕ ಭಾಜಪ ಸರ್ಕಾರವು ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾಯಿದೆಯನ್ನು ಕಾಂಗ್ರೆಸ್ ಸರ್ಕಾರವು ತೆಗೆದುಹಾಕುವ ಮೂಲಕ ಮಹಾಪಾಪವನ್ನು ಮಾಡಿತ್ತು. ಆದರೆ ಈಗ ಮತ್ತೊಮ್ಮೆ ಈ ಮಹತ್ವಪೂರ್ಣ ಕಾಯಿದೆಯನ್ನು ಜಾರಿಗೆ ತಂದ ಯಡಿಯುರಪ್ಪ ನೇತೃತ್ವದ ಸರ್ಕಾರಕ್ಕೆ ಅಭಿನಂದನೆಗಳು ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button