
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಶ್ರೀಶೈಲ ಚೌಗಲೆ (37) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೆಳಗಾವಿಯ ಚನ್ನಮ್ಮ ನಗರದಲ್ಲಿ ಗುರುವಾರ ಅವರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶ್ರೀಶೈಲ ಚೌಗಲೆ ಅವರು ಮನೆಯ ಒಳಗಡೆ ಲಾಕ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ವೇಳೆ ಅನುಮಾನಗೊಂಡ ಪತ್ನಿ ತಕ್ಷಣವೇ ಅಧೀನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಘಟನೆ ಕುರಿತು ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



