
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಸತಿ ಪ್ರದೇಶದಲ್ಲಿ ಅಪಾಯಕಾರಿ ರೀತಿಯಲ್ಲಿ ಸಂಗ್ರಹಿಸಿದ ಪಟಾಕಿಗಳನ್ನುಮೂಡಲಗಿ ಪೊಲೀಸರು ವಶಪಡಿಸಿಕೊಂಡಿದ್ದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
1,60,675 ರೂ. ಮೌಲ್ಯದ ಪಟಾಕಿಗಳನ್ನು ಜಪ್ತಿ ಮಾಡಲಾಗಿದೆ. ಇವುಗಳನ್ನು ಜನ ವಸತಿ ಪ್ರದೇಶದಲ್ಲಿ ಎಲ್ಲ ನಿಯಮಾವಳಿಗಳನ್ನು ಉಲ್ಲಂಘಿಸಿ ಅಪಾಯಕಾರಿ ರೀತಿಯಲ್ಲಿ ಸಂಗ್ರಹಿಸಲಾಗಿತ್ತು.
ಗಣೇಶೋತ್ಸವ ಸಂದರ್ಭದಲ್ಲಿ ಮಾರಾಟ ಮಾಡಲು ವ್ಯಾಪಕ ಪ್ರಮಾಣದ ಪಟಾಕಿಗಳನ್ನು ತಂದು ಯಾವುದೇ ಸುರಕ್ಷತೆ ಇಲ್ಲದೆ ದಾಸ್ತಾನು ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತನಿಖೆ ಮುಂದುವರಿಸಲಾಗಿದೆ.
ಇಂದಿನಿಂದ ಮತ್ತೆ ಭಾರಿ ಮಳೆ ಎಚ್ಚರಿಕೆ; ಆರೆಂಜ್ ಅಲರ್ಟ್ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ