
ಪ್ರಗತಿವಾಹಿನಿ ಸುದ್ದಿ: ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದೆ. ಹಲವೆಡೆ ಪಟಾಕಿ ಸಂಗ್ರಹಗಳು ಜೋರಾಗಿವೆ. ಈ ನಡುವೆ ಪೊಲೀಸರು ಪಟಾಕಿ ಗೋಡೌನ್ ಮೇಲೆ ದಾಳಿ ನಡೆಸಿ ಲೈಸನ್ಸ್ ಇಲ್ಲದೇ ಪಟಾಕಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.
ಬೆಂಗಳೂರಿನ ಕುಂಬಳಗೋಡು ವ್ಯಾಪ್ತಿಯಲ್ಲಿ ಪಟಾಕಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. 10 ಲಕ್ಷ ಮೌಲ್ಯದ ಪಟಾಕಿಗಳನ್ನು ಜಪ್ತಿ ಮಾಡಲಾಗಿದೆ.
ಪಟಾಕಿ ಶೇಖರಿಸಿಟ್ಟಿದ್ದ ಶ್ರೀನಿವಾಸ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಪಟಾಕಿ ಗೋದಾಮಿನ ಮಾಲೀಕ ಈಗಷ್ಟೇ ಲೈಸೆನ್ಸ್ ಗಾಗಿ ಅರ್ಜಿ ಸಲ್ಲಿಸಿದ್ದರು. ಲೈಸೆನ್ಸ್ ಪಡೆಯುವ ಮುನ್ನವೇ ಪಟಾಕಿ ಶೇಖರಿಸಿಟ್ಟಿದ್ದರು, ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.