Latest

ಭರ್ಜರಿ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

ಪ್ರಗತಿವಾಹಿನಿ ಸುದ್ದಿ, ಲಂಡನ್: ಕೆನ್ನಿಂಗ್ಟನ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ  ಮೊದಲ ಏಕದಿನ ಪಂದ್ಯದಲ್ಲಿ  ಭಾರತ ತಂಡದ  ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

ಇಂಗ್ಲೆಂಡ್ ತಂಡ ನೀಡಿದ 111 ರನ್ ಗಳ ಸಾಮಾನ್ಯ ಗುರಿಯನ್ನು ಅನುಸರಿಸಿದ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ 5 ಭರ್ಜರಿ ಸಿಕ್ಸರ್ ಮತ್ತು 6 ಬೌಂಡರಿ ನೆರವಿನಿಂದ ಕೇವಲ 58 ಎಸೆತಗಳಲ್ಲಿ 76 ರನ್  ಪಡೆದರು. ಈ ಮೂಲಕ ರೋಹಿತ್ ಶರ್ಮಾ ಭಾರತದ ಪರ ಗರಿಷ್ಠ, ಅಂದರೆ 250 ಸಿಕ್ಸರ್ ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್ ಮನ್ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Home add -Advt

ಭಾರತದ ಇನ್ನಿಂಗ್ಸ್ ನ 19ನೇ ಓವರ್ ನಲ್ಲಿ ಇಂಗ್ಲೆಂಡ್ ನ ವೇಗದ ಬೌಲರ್ ಬ್ರೈಡನ್ ಕಾರ್ಸೆ ಎಸೆದ 2ನೇ ಎಸೆತವನ್ನು ರೋಹಿತ್ ಶರ್ಮಾ ಫೈನ್ ಲೆಗ್ ನತ್ತ ಹುಕ್ ಮಾಡಿ ಸಿಕ್ಸರ್ ಗಳಿಸಿದರು.  ಇದು ಅವರ ಏಕದಿನ ಪಂದ್ಯದ ವೃತ್ತಿ ಜೀವನದ 250ನೇ ಸಿಕ್ಸರ್ ಆಗಿದೆ. ಅವರು ಕೇವಲ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.   ಅಂತಿಮವಾಗಿ ರೋಹಿತ್ ಶರ್ಮಾ ಅಜೇಯ 76 (58) ರನ್​ ಬಾರಿಸಿದರು. ಅವರಿಗೆ ಉತ್ತಮ ಸಾಥ್ ನೀಡಿದ ಶಿಖರ್ ಧವನ್ 4 ಬೌಂಡರಿ ಸಹಿತ 31 ರನ್ ಗಳಿಸಿದರು. 

ಏಕದಿನದಲ್ಲಿ ಅತೀ ಹೆಚ್ಚು ಸಿಕ್ಸರ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್  ಶರ್ಮಾ 4ನೇ ಸ್ಥಾನದಲ್ಲಿದ್ದಾರೆ. 351 ಸಿಕ್ಸರ್ ಸಿಡಿಸಿರುವ ಪಾಕಿಸ್ತಾನದ ಶಾಹಿದ್ ಅಫ್ರಿದಿ ಮೊದಲ ಸ್ಥಾನ, 331 ಸಿಕ್ಸರ್ ಸಿಡಿಸಿರುವ ವೆಸ್ಟ್ ಇಂಡೀಸ್ ನ ಕ್ರಿಸ್ ಗೇಯ್ಲ್ ದ್ವಿತೀಯ ಹಾಗೂ  270 ಸಿಕ್ಸರ್ ಬಾರಿಸಿರುವ ಶ್ರೀಲಂಕಾದ ಸನತ್ ಜಯಸೂರ್ಯ ಮೂರನೇ ಸ್ಥಾನದಲ್ಲಿದ್ದಾರೆ.

ಅಂತಿಮವಾಗಿ 18.4 ಓವರ್​ಗಳಲ್ಲಿ ಟೀಮ್ ಇಂಡಿಯಾ ವಿಕೆಟ್ ನಷ್ಟವಿಲ್ಲದೆ 114 ರನ್​ ಗಳಿಸುವ ಮೂಲಕ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಪಡೆಯಿತು.

ವ್ಯಕ್ತಿಗೆ ಅನೈಸರ್ಗಿಕ ಲೈಂಗಿಕ ಕಿರುಕುಳ; ಪೌರಸೇವಾ ನೌಕರ ಅರೆಸ್ಟ್

Related Articles

Back to top button