
ಪ್ರಗತಿವಾಹಿನಿ ಸುದ್ದಿ: ರಾಜ್ಯವನ್ನೆ ಬಿಚ್ಚೆಬಿಳಿಸಿದ ಐದು ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಆರೋಪಿಯನ್ನು ಎನ್ಕೌಂಟರ್ ಮಾಡಿಲಾಗಿದ್ದು, ಅತ್ಯಾಚಾರ ನಡೆಸಿ ಕೊಲೆಗೈದಿರುವ ಘಟನೆಯ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೊರರಾಜ್ಯಗಳಿಂದ ಬಂದವರಿಂದಲರೇ ಕರ್ನಾಟಕದಲ್ಲಿ ಅಪರಾಧ ಪ್ರಮಾಣ ಹೆಚ್ಚುತ್ತಿದೆ ಹೊರರಾಜ್ಯದ ಜನರಿಗೆ ಇಲ್ಲಿನ ಭಾಷೆ ಅಥವಾ ಸಂಸ್ಕೃತಿಯ ಪರಿಚಯ ಇಲ್ಲ. ಇಲ್ಲಿನ ಜನರ ಭಾವನೆಗಳು ಅರ್ಥವಾಗುವುದಿಲ್ಲ ಹೀಗಾಗಿ ಈ ರೀತಿ ವರ್ತಿಸುತ್ತಾರೆ ಎಂದು ಹೇಳಿದರು.
ಕಟ್ಟಡ ಕಾರ್ಮಿಕರ ಪೈಕಿ ಹೆಚ್ಚಿನವರು ಹೊರರಾಜ್ಯಗಳಿಂದ ಬಂದವರಾಗಿದ್ದಾರೆ. ಅವರಲ್ಲಿ ಹಲವರು ಅಪರಾಧಕೃತ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆಂದು ಆರೋಪಿಸಿದ ಗೃಹಸಚಿವರು, ಕಾರ್ಮಿಕ ಇಲಾಖೆಯ ಜೊತೆ ಸಭೆ ನಡೆಸಿ ಇಂತಾ ಕೃತ್ಯಗಳಿಗೆ ಕಡಿವಾಣ ಹಾಕಲು ಯತ್ನಿಸುವುದಾಗಿ ಹೇಳಿದರು.