ಅಪ್ರಾಪ್ತೆ ಮೇಲೆ ಅತ್ಯಾಚಾರ: ವ್ಯಕ್ತಿ ಬಂಧನ
ಪ್ರಗತಿವಾಹಿನಿ ಸುದ್ದಿ, ಖಾನಾಪುರ:
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ನಂದಗಡ ಠಾಣೆಯ
ಪೊಲೀಸರು ಗುರುವಾರ ತಾಲ್ಲೂಕಿನ ಕಾಪೋಲಿ ಗ್ರಾಮದ ಗೋಪಾಲ ಅಲಿಯಾಸ್ ಅಶೋಕ ದೇವಳಿ (30)
ಎಂಬಾತನನ್ನು ಬಂಧಿಸಿದ್ದು, ಆತನ ಮೇಲೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡು
ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಗ್ರಾಮವೊಂದರ ಅಪ್ರಾಪ್ತ ಬಾಲಕಿ
ಇತ್ತೀಚೆಗೆ ತನ್ನ ಬೇಸಿಗೆ ರಜೆಯನ್ನು ಕಳೆಯಲು ಕಾಪೋಲಿ ಗ್ರಾಮದ ತನ್ನ ಅತ್ತೆಯ ಮನೆಗೆ
ಬಂದಿದ್ದಳು. ರಜೆಯನ್ನು ಮುಗಿಸಿ ತಮ್ಮೂರಿಗೆ ಮರಳಿದ ಬಾಲಕಿಯ ಆರೋಗ್ಯದಲ್ಲಿ ಏರುಪೇರು
ಉಂಟಾದಾಗ ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆಯ ಮೇಲೆ ಅತ್ಯಾಚಾರ ನಡೆದ ಬಗ್ಗೆ
ಮಾಹಿತಿಯನ್ನು ಪಡೆದು ಅದನ್ನು ಬಾಲಕಿಯ ಪಾಲಕರಿಗೆ ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಅಪ್ರಾಪ್ತೆಯ ಪಾಲಕರು ಗುರುವಾರ ನಂದಗಡ ಠಾಣೆಯಲ್ಲಿ ಆರೋಪಿ ಗೋಪಾಲ ವಿರುದ್ಧ ದೂರು ದಾಖಲಿಸಿದ್ದರು. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಸಂತ್ರಸ್ತ ಬಾಲಕಿಯನ್ನು
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆಕೆ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ನಂದಗಡ ಠಾಣೆಯ ಮೂಲಗಳು ತಿಳಿಸಿವೆ.
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆಕೆ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ನಂದಗಡ ಠಾಣೆಯ ಮೂಲಗಳು ತಿಳಿಸಿವೆ.
ಬೈಕ್ ಡಿಕ್ಕಿ: ನಿವೃತ್ತ ಶಿಕ್ಷಕ ಸಾವು
ಖಾನಾಪುರ ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ರಸ್ತೆ ಬದಿ ಸಾಗುತ್ತಿದ್ದ ನಿವೃತ್ತ
ಶಿಕ್ಷಕರೊಬ್ಬರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು
ಸಾವನ್ನಪ್ಪಿದ್ದಾರೆ.
ಶಿಕ್ಷಕರೊಬ್ಬರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು
ಸಾವನ್ನಪ್ಪಿದ್ದಾರೆ.
ಮೃತರನ್ನು ತಾಲ್ಲೂಕಿನ ನಾಗುರ್ಡಾ ವಾಡಾ ಗ್ರಾಮದ ನಿವಾಸಿ ಲಕ್ಷ್ಮಣ ಶಿವಪ್ಪ ಪಾಟೀಲ (82) ಎಂದು ಗುರುತಿಸಿಸಲಾಗಿದ್ದು, ಗುರುವಾರ ಸಂಜೆ ಇವರು ಕಾರ್ಯನಿಮಿತ್ತ ಪಟ್ಟಣಕ್ಕೆ ಆಗಮಿಸಿ ಬಸ್ ನಿಲ್ದಾಣದ ಬಳಿ ರಸ್ತೆ ಬದಿ ಹೊರಟಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಬೈಕ್ ಗುದ್ದಿದ ಪರಿಣಾಮ ಗಂಭೀರ ಗಾಯಗಳಿಂದ
ಬಳಲಿದ್ದರು.
ಬಳಲಿದ್ದರು.
ಕೂಡಲೇ ಸ್ಥಳೀಯರು ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಸಾವನ್ನಪ್ಪಿದರು ಎಂದು ಮೂಲಗಳು ತಿಳಿಸಿವೆ. ಈ ಕುರಿತು ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಧೊಳಿ ಬಳಿ ಅಕ್ರಮ ಮರಳು ಸಾಗಿಸುತ್ತಿದ್ದ ಲಾರಿಗಳು ವಶ
ಖಾನಾಪುರ ತಾಲ್ಲೂಕಿನ ಗೋಧೋಳಿ ಗ್ರಾಮದ ಬಳಿ ಅಳ್ನಾವರ ರಾಮನಗರ ಹೆದ್ದಾರಿಯಲ್ಲಿ
ಶುಕ್ರವಾರ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮೂರು ಲಾರಿಗಳನ್ನು ಮಾಲುಸಮೇತ
ವಶಪಡಿಸಿಕೊಂಡಿರುವ ನಂದಗಡ ಪೊಲೀಸರು ಈ ಕುರಿತು ಲಾರಿ ಮಾಲೀಕರ ವಿರುದ್ಧ ಪ್ರಕರಣ
ದಾಖಲಿಸಿಕೊಂಡಿದ್ದಾರೆ.
ಶುಕ್ರವಾರ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮೂರು ಲಾರಿಗಳನ್ನು ಮಾಲುಸಮೇತ
ವಶಪಡಿಸಿಕೊಂಡಿರುವ ನಂದಗಡ ಪೊಲೀಸರು ಈ ಕುರಿತು ಲಾರಿ ಮಾಲೀಕರ ವಿರುದ್ಧ ಪ್ರಕರಣ
ದಾಖಲಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ತಾಲ್ಲೂಕಿನ ನಂದಗಡ-ಹಲಸಿ ಭಾಗದಿಂದ ಫಿಲ್ಟರ್ ಮರಳು ತುಂಬಿಕೊಂಡು ಗೋಧೋಳಿ ಮಾರ್ಗವಾಗಿ ಧಾರವಾಡದತ್ತ ಸಾಗುತ್ತಿದ್ದ ಲಾರಿಗಳನ್ನು ವಶಕ್ಕೆ ಪಡೆದಿದ್ದು, ಈ ಕುರಿತು ತನಿಖೆ ಮುಂದುರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಖಾನಾಪುರ ತಾಲ್ಲೂಕಿನ ದಾರೋಳಿ ಅರಣ್ಯದಲ್ಲಿ ವ್ಯಕ್ತಿಯೊಬ್ಬರ ಶವ ನೇಣುಬಿಗಿದ
ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.
ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ