
ಪ್ರಗತಿವಾಹಿನಿ ಸುದ್ದಿ ಗೌಹಾಟಿ
ಅಲ್ ಖೈದಾ ಜೊತೆ ಸಂಪರ್ಕ ಹೊಂದಿರುವ ಆರು ಶಂಕಿತ ಉಗ್ರರನ್ನು ಅಸ್ಸಾಂನ ಬರ್ಪೇಟಾ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಬಾಂಗ್ಲಾದೇಶದ ಅಲ್ಖೈದಾ ಉಗ್ರಗಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.
ಮಾರ್ಚ್ ೪ರಂದು ಓರ್ವ ಜಿಹಾದಿಯನ್ನು ಬಂಧಿಸಿದ್ದು ವಿಚಾರಣೆಯ ವೇಳೆ ಆತ ನೀಡಿದ ಮಾಹಿತಿಯ ಆಧಾರದಲ್ಲಿ ಆರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಬಂಧಿತರಿಂದ ಮಹತ್ವದ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ ಎಂದು ಬರ್ಪೇಟಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತವಾ ಸಿನ್ಹಾ ತಿಳಿಸಿದ್ದಾರೆ.
ನಿಖರ, ನಿರಂತರ ಮತ್ತು ನಿಷ್ಪಕ್ಷಪಾತ ಸುದ್ದಿಗಳಿಗಾಗಿ ಪ್ರಗತಿವಾಹಿನಿ ಗ್ರುಪ್ ಸೇರಲು NEWS ಎಂದು ಟೈಪ್ ಮಾಡಿ 8197712235 ನಂಬರ್ ಗೆ ವಾಟ್ಸಪ್ ಮಾಡಿ.
ದಯವಿಟ್ಟು ನಮ್ಮ YouTube ಚಾನೆಲ್ ಗೆ ಸಬ್ ಸ್ಕ್ರೈಬ್ ಮಾಡಿ