ಪ್ರಗತಿವಾಹಿನಿ ಸುದ್ದಿ, ಹತ್ತರಗಿ -ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.
ಬೆಳಗಾವಿ ತಾಲೂಕು ಕಡೋಲಿ ಗ್ರಾಮದ ಕಿರಣ ಯಶವಂತ ಭಜಂತ್ರಿ(೨೦) ಮೃತ ಯುವಕ. ಬಂಬರಗೆ
ಗ್ರಾಮದ ಅಶೋಕ ಸುರೇಶ ಮ್ಯಾಗೇರಿ ಗಾಯಗೊಂಡಿದ್ದಾನೆ. ಇವರು ಹತ್ತಿರಗಿ ಟೋಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಗುರುವಾರ ಬೆಳಗ್ಗೆ ಕೆಲಸಕ್ಕೆಂದು ಹೋಗುತ್ತಿದ್ದಾಗ ಬೈಕ್ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರ
ಗಾಯಗೊಂಡ ಕಿರಣ ಭಜಂತ್ರಿಯನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.
ಹಿಂಬದಿ ಸವಾರ ಅಶೋಕ ಮ್ಯಾಗೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ
ಪಡೆಯುತ್ತಿದ್ದಾನೆ. ಈ ಕುರಿತು ಯಮಕನಮರಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.