Athani Takkennavar
Beereshwara13
GIT add4

ಅಪ್ರಾಪ್ತರ ಅಶ್ಲೀಲ ವಿಡಿಯೋ ಅಪ್ಲೋಡ್; ಆರೋಪಿಗೆ ಶಿಕ್ಷೆ ಪ್ರಕಟ

ಕಾರವಾರದ ಸಿಜೆಎಂ ನ್ಯಾಯಾಲಯದಿಂದ ತೀರ್ಪು

KLE1099 Add

ಪ್ರಗತಿವಾಹಿನಿ ಸುದ್ದಿ; ಕಾರವಾರ: ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ ಆರೋಪಿಗೆ ಕಾರವಾರದ ಸಿಜೆಎಂ ನ್ಯಾಯಾಲಯವು 9 ತಿಂಗಳು ಜೈಲು ಮತ್ತು 1 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಶಿವನಗಾಂವ್ ಮೂಲದ ಹರ್ಷಲ್ ಬಲರಾಮ ರೌಲ್ (37) ಶಿಕ್ಷೆಗೊಳಗಾದ ಆರೋಪಿ.

ಈತ 6-7-2021ರಂದು ಫೇಸ್ ಬುಕ್ ನಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ್ದು, ಈ ಬಗ್ಗೆ ಕಾರವಾರದ ಸಿಇಎನ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಸಿಇನ್ ಅಪರಾಧ ಠಾಣೆಯ ಪಿಐ ಪಿ. ಸೀತಾರಾಮ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣವನ್ನು ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಮಂಜುನಾಥ ನಾಯ್ಕ ಅವರು ವಾದ ಮಂಡಿಸಿದ್ದರು.

ಶಿಕ್ಷಕರ ವರ್ಗಾವಣಾ ತಿದ್ದುಪಡಿ ವಿಧೇಯಕ ಮಂಡನೆ

ಶಿಕ್ಷಕರ ವರ್ಗಾವಣಾ ತಿದ್ದುಪಡಿ ವಿಧೇಯಕ ಮಂಡನೆ

Nivedita Navalgund
You cannot copy content of this page