World Environment Day

ನಿಂಬಾಳಕರ್, ಅಜಯ್ ಹಿಲೋರಿ ಮನೆ ಸೇರಿ 15 ಕಡೆ ಸಿಬಿಐ ದಾಳಿ

ಐಎಂಎ ಪ್ರಕರಣದ ಹಿನ್ನೆಲೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು -ಬಹುಕೋಟಿ ವಂಚನೆ ಪ್ರಕರಣ ಐಎಂಎ ಹಗರಣದ ಹಿನ್ನೆಲೆಯಲ್ಲಿ ಸಿಬಿಐ 15 ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದೆ. ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ ನಿಂಬಾಳಕರ್, ಅಜಯ್ ಹಿಲೋರಿ ಸೇರಿದಂತೆ ಹಲವರ ಮನೆ ಮೇಲೆ ದಾಳಿ ನಡೆಸಲಾಗಿದೆ.

ಐಎಂಎ ವಂಚನೆ ಪ್ರಕರಣದಲ್ಲಿ ಈ ಹಿಂದೆ ತನಿಖೆ ನಡೆಸಿ ಕ್ಲೀನ್ ಚಿಟ್ ನೀಡಿದ ಆರೋಪ ಈ ಅಧಿಕಾರಿಗಳ ಮೇಲಿದೆ. ರಾಜ್ಯದ ವಿವಿಧೆಡೆ ಇರುವ ಸಂಬಂಧಿಸಿದ ಅಧಿಕಾರಿಗಳ ಮನೆಗಳ ಮೇಲೂ ದಾಳಿ ನಡೆಸಲಾಗುತ್ತಿದೆ.

ಈಗಷ್ಟೆ ದಾಳಿ ನಡೆದಿದ್ದು, ವಿಚಾರಣೆ ಮುಂದುವರಿದಿದೆ.