GIT add 2024-1
Laxmi Tai add
Beereshwara 33

ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಎನ್ ಕೌಂಟರ್

8 ಪೊಲೀಸರನ್ನು ಬರ್ಬರವಾಗಿ ಹತ್ತೆಗೈದಿದ್ದ ಗ್ಯಾಂಗ್ ಲೀಡರ್, 60ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಲಕ್ನೋ – ಕುಖ್ಯಾತ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಪೊಲೀಸರ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ.

ನಿನ್ನೆ ಬಂಧಿಸಲಾಗಿದ್ದ ವಿಕಾಸ ದುಬೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಕಾರಿನಲ್ಲಿ ಕರೆದೊಯ್ಯುತ್ತಿರುವಾಗ ಎಸ್ಕಾರ್ಟ್ ವಾಹನನ ಪಲ್ಟಿಯಾಗಿದೆ. ಈ ವೇಳೆ ದುಬೆ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನನ್ನು ಹಿಡಿಯಲು ಯತ್ನಿಸಿದರು. ಅದು ಸಾಧ್ಯವಾಗದಿದ್ದಾಗ ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದುಬೆ ಸತ್ತುಮಲಗಿದ್ದಾನೆ.

ಕಾನ್ಪುರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 8 ಪೊಲೀಸರನ್ನು ಹತ್ಯೆ ಮಾಡಿ ತಲೆಮರಿಸಿಕೊಂಡಿದ್ದ ಗ್ಯಾಂಗಸ್ಟರ್​ ವಿಕಾಸ್​ ದುಬೆಯನ್ನು ಉತ್ತರ ಪ್ರದೇಶ ಪೊಲೀಸರು ಉಜ್ಜಯಿನಿಯಲ್ಲಿ ನಿನ್ನೆ ಪೊಲೀಸರು ಬಂಧಿಸಿದ್ದರು.

Emergency Service

ವಿಕಾಸ್ ದುಬೆ ಉಜ್ಜೈನ್ ನಲ್ಲಿರುವ ಮಹಾಕಾಲ್ ದೇವಸ್ಥಾನಕ್ಕೆ ಹೋಗಿದ್ದನು. ದೇವಸ್ಥಾನದ ಭದ್ರತಾ ಸಿಬ್ಬಂದಿ ದುಬೆಯನ್ನು ಗುರುತಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇವಸ್ಥಾನದಿಂದ ಹೊರ ಬರುವಷ್ಟರಲ್ಲಿ ಬಂದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು.ಈ ವೇಳೆ ಗುಂಡಿನ ಮಳೆ ಸುರಿಸಿದ್ದಾರೆ. ಪರಿಣಾಮ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಗಳು ಹಾಗೂ 4 ಪೊಲೀಸರು ಮೃತಪಟ್ಟಿದ್ದರು. ಇದೇ ಸಂದರ್ಭದಲ್ಲಿ ದುಬೆ ಬೆಂಬಲಿಗರು ಪೊಲೀಸರ ಬಳಿಯಿದ್ದ ಎಕೆ-47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದರು.

ಈ ಘಟನೆ ನಂತರ ವಿಕಾಸ್​ ತಲೆಮೆರಿಸಿಕೊಂಡಿದ್ದ. ಈತನಿಗಾಗಿ ಪೊಲೀಸರು ಬಲೆ ಬೀಸಿದ್ದರು. ಈ ಮಧ್ಯೆ ಆತನ ಆಪ್ತ ಅಮರ್, ಸಹಚರರಾದ ಪ್ರಭಾತ್ ಹಾಗೂ ರಣಬೀರ್​​ನನ್ನು ಪೊಲೀಸರು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಈಗ ವಿಕಾಸ್ ದುಬೆ​ನನ್ನು ಪೊಲೀಸರು ಬಂಧಿಸಿದ್ದರು.

ಕೊನೆಗೂ ಪೊಲೀಸರ ಬಲೆಗೆ ಬಿದ್ದ ಗ್ಯಾಂಗ್ ಸ್ಟರ್ ದುಬೆ

Bottom Add3
Bottom Ad 2