Athani Takkennavar
Beereshwara13
GIT add4

ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ; ಮಾರಾಮಾರಿಯಲ್ಲಿ ಇಬ್ಬರ ದುರ್ಮರಣ

ಹುಲಿಹೈದರ ಗ್ರಾಮ ಉದ್ವಿಗ್ನ

KLE1099 Add

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ದೊಣ್ಣೆಯಿಂದ ಹೊಡೆದಾಡಿಕೊಂಡಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿಯ ಹುಲಿಹೈದರ ಗ್ರಾಮದಲ್ಲಿ ನಡೆದಿದೆ.

ಎರಡು ಗುಂಪುಗಳ ನಡುವೆ ಸಣ್ಣ ವಿಚಾರವಾಗಿ ಆರಂಭವಾದ ವಾಗ್ವಾದ ಇಬ್ಬರ ಸಾವಿನಲ್ಲಿ ಅಂತ್ಯವಾಗಿದ್ದು, ಕೊಪ್ಪಳದ ಹುಲಿಹೈದರ್ ಗ್ರಾಮ ಸಂಪೂರ್ಣ ಉದ್ವಿಗ್ನಗೊಂಡಿದೆ.

ವೃತ್ತ ನಿರ್ಮಾಣ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಆರಂಭವಾದ ವಾಗ್ವಾದ ಹೊಡೆದಾಟಕ್ಕೆ ತಿರುಗಿದೆ. ರಸ್ತೆ ಮಧ್ಯೆಯೇ ಮಾರಾಮಾರಿ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಗಲಾಟೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಯಕ್ಕಪ್ಪ ಶ್ಯಾಮಪ್ಪ ಹಾಗೂ ಬಾಷಾಸಾಬ ಮೃತ ದುರ್ದೈವಿಗಳು. ಸ್ಥಳಕ್ಕೆ ಕನಕಗಿರಿ ಪೊಲೀಸರು ದೌಡಾಯಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.

ಉಜ್ಜಯಿನಿ ದೇವಸ್ಥಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರ ಗಲಾಟೆ; ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆ

Nivedita Navalgund
You cannot copy content of this page