Advertisement -Home Add

ಕೊರೋನಾ ವಾರ್ಡ್ ನಲ್ಲಿ ಆಕ್ಸಿಜನ್ ಸಿಲೆಂಡರ್ ಸ್ಫೋಟ; ಮೂವರಿಗೆ ಗಾಯ

ಓರ್ವ ವೈದ್ಯ, ಓರ್ವ ನರ್ಸ್ ಹಾಗೂ ವಾರ್ಡ್ ಬಾಯ್ ಗೆ ಗಾಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ಆಕ್ಸಿಜನ್ ಸಿಲೆಂಡರ್ ಸ್ಫೋಟಿಸಿ ಮೂವರು ಗಾಯಗೊಂಡಿದ್ದಾರೆ.

ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಆಕ್ಸಿಜನ್ ಸಿಲೆಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿತ್ತು. ಈ ವೇಳೆ ಅಲ್ಲಿದ್ದ ಓರ್ವ ವೈದ್ಯ, ಓರ್ವ ನರ್ಸ್ ಹಾಗೂ ವಾರ್ಡ್ ಬಾಯ್ ಒಬ್ಬರು ಗಾಯಗೊಂಡಿದ್ದಾರೆ.

ಗಾಯಗೊಂಡವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.