
ಬೆಳಗಾವಿ ತ್ರಿವಳಿ ಕೊಲೆ ಪ್ರಕರಣ; ಪ್ರವೀಣ್ ಭಟ್ ನಿರ್ದೋಷಿ ಎಂದು ಹೈಕೋರ್ಟ ತೀರ್ಪು
ತಾಯಿ ಹಾಗೂ ಇಬ್ಬರು ಮಕ್ಕಳ ಹತ್ಯೆ ಕೇಸ್


ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಹೈಕೋರ್ಟ್ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ.
ಆರೋಪಿ ಪ್ರವೀಣ್ ಭಟ್ ಗೆ ಬೆಳಗಾವಿ ಎರಡನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ 2018, ಏಪ್ರಿಲ್ 16ರಂದು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ತೀರ್ಪಿನ ವಿರುದ್ಧ ಪ್ರವೀಣ್ ಭಟ್ ಹೈಕೋರ್ಟ್ ಮೊರೆ ಹೋಗಿದ್ದ. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ.ಎಸ್.ಮುದಗಲ್, ಎಂಜಿಎಸ್ ಕಮಲ್ ಅವರಿದ್ದ ಪೀಠ ಇದೀಗ ಆರೋಪಿಯನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ.
2015 ಆಗಸ್ಟ್ 16ರಂದು ಬೆಳಗಾವಿಯ ಕುವೆಂಪು ನಗರದಲ್ಲಿ ಮಹಿಳೆ ರೀನಾ ಮಾಲಗತ್ತಿ ಹಾಗೂ ಇಬ್ಬರು ಮಕ್ಕಳಾದ ಆದಿತ್ಯ, ಸಾಹಿತ್ಯ ಮಾಲಗತ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಘಟನೆ ನಡೆದ 24 ಗಂಟೆಯಲ್ಲಿ ಆರೋಪಿ ಪ್ರವೀಣ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು. ರೀನಾ ಹಾಗೂ ಪ್ರವೀಣ್ ಭಟ್ ನಡುವಿನ ಅಕ್ರಮ ಸಂಬಂಧವೇ ಕೊಲೆಗೆ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಆರೋಪಿ ಪ್ರವೀಣ್ ನಿರ್ದೋಷಿ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ಮತ್ತೊಂದು ಭೀಕರ ಅಪಘಾತ; 10 ಯಾತ್ರಾರ್ಥಿಗಳ ದುರ್ಮರಣ

ನಿಖರ, ನಿರಂತರ ಮತ್ತು ನಿಷ್ಪಕ್ಷಪಾತ ಸುದ್ದಿಗಳಿಗಾಗಿ ಪ್ರಗತಿವಾಹಿನಿ ಗ್ರುಪ್ ಸೇರಲು NEWS ಎಂದು ಟೈಪ್ ಮಾಡಿ 8197712235 ನಂಬರ್ ಗೆ ವಾಟ್ಸಪ್ ಮಾಡಿ.
ದಯವಿಟ್ಟು ನಮ್ಮ YouTube ಚಾನೆಲ್ ಗೆ ಸಬ್ ಸ್ಕ್ರೈಬ್ ಮಾಡಿ