Yoga add Final 1
KLE1099 Add

ಐಷಾರಾಮಿ ಅಪಾರ್ಟ್ ಮೆಂಟ್ ನಲ್ಲಿ ಮಹಿಳೆ ಆತ್ಮಹತ್ಯೆ

ಇನ್ಸೂರೆನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಅನುಮಾನಾಸ್ಪದ ಸಾವು

GIT Add 3
Beereshwara add 12

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಷಾರಾಮಿ ಅಪಾರ್ಟ್ ಮೆಂಟ್ ನಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ದಾಸರಪುರ ಎಪಿಎಂಸಿ ಬಳಿ ನಡೆದಿದೆ.

32 ವರ್ಷದ ಶ್ವೇತಾ ಮೃತ ಮಹಿಳೆ. 6 ವರ್ಷಗಳ ಹಿಂದೆ ಸಯ್ಯದ್ ಎಂಬುವವರನ್ನು ವಿವಾಹವಾಗಿದ್ದ ಶ್ವೇತಾ, ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಯಲ್ಲಿ ವರ್ಕ್ ಫ್ರಂ ಹೋಂ ಕೆಲಸ ಮಾಡುತ್ತಿದ್ದರು. ಪತಿ ಕೆಲಸಕ್ಕೆ ತೆರಳಿದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಶ್ವೇತಾ ಅವರ ಮೃತದೇಹ ಅಪಾರ್ಟ್ ಮೆಂಟ್ ನ ಅವರ ಮನೆಯಲ್ಲಿ ನೇಣು ಬಿಗಿದುಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದೆ. ಬೆಡ್ ರೂಂ ನಲ್ಲಿರುವ ಫ್ಯಾನ್ ಗೆ ನೇಣು ಹಾಕಿಕೊಂಡಿರುವ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RSS ಪ್ರಮುಖನಿಗೆ ಚಾಕು ಇರಿದ ದುಷ್ಕರ್ಮಿಗಳು

Home add- Bottom