Kannada NewsKarnataka NewsPolitics

*ಕೋವಿಡ್ ಅವಧಿಯಲ್ಲಿ ಕೋಟಿ ಕೋಟಿ ಲೂಟಿ: ತನಿಖೆಗೆ ಸರ್ಕಾರ ಅಸ್ತು*

ಪ್ರಗತಿವಾಹಿನಿ ಸುದ್ದಿ: ಕೋವಿಡ್ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ 769 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಈಗಿನ ಕಾಂಗ್ರೆಸ್ ಸರ್ಕಾರ ಅದರ ತನಿಖೆ ನಡೆಸಲು ಮುಂದಾಗಿದೆ.‌

ಬಿಜೆಪಿಯ ಆಡಳಿತದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ಬಗ್ಗೆ ಹೈಕೋರ್ಟ್‌ ನಿವೃತ್ತ ನ್ಯಾ.ಜಾನ್ ಮೈಕೆಲ್ ಡಿ.ಕುನ್ಹಾ ಅವರ ನೇತೃತ್ವದ ಆಯೋಗವು 769 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ವರದಿ ನೀಡಿತ್ತು.

ಈ ವರದಿಯನ್ನು ಪರಿಶೀಲಿಸಿ ಅಗತ್ಯ ಕ್ರಮವನ್ನು ಕೈಗೊಳ್ಳುವಂತೆ ಆದೇಶಿಸಿ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯ ಸಚಿವ ಸಂಪುಟ ಉಪ ಸಮಿತಿ ರಚಿಸಿರುವ ಬಗ್ಗೆ ಸಿಎಂ ಆದೇಶ ಹೊರಡಿಸಿದ್ದಾರೆ. ಡಿಸಿಎಂ ಅಧ್ಯಕ್ಷತೆಯ ಈ ಸಮಿತಿಯು ಸಚಿವರಾದ ಜಿ.ಪರಮೇಶ್ವರ್, ಹೆಚ್.ಕೆ ಪಾಟೀಲ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಶರಣ ಪ್ರಕಾಶ್ ಪಾಟೀಲ ಅವರನ್ನು ಒಳಗೊಂಡಿದೆ.

ಬಿಜೆಪಿಯ ಆಡಳಿತದ ಅವಧಿಯಲ್ಲಿ ಕೋವಿಡ್ ನಿರ್ವಹಣೆ ಹೆಸರಲ್ಲಿ ವೈದ್ಯಕೀಯ ಉಪಕರಣಗಳು 374136 ಕೋಟಿ ರೂಪಾಯಿ ಮೊತ್ತದ ಖರೀದಿ ಪ್ರಕ್ರಿಯೆಯಲ್ಲಿ ಬರೋಬ್ಬರಿ 769 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಡಿ.ಕುನ್ಹಾ ಅವರ ನೇತೃತ್ವದ ಆಯೋಗವು ವರದಿ ನೀಡಿತ್ತು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button