Kannada NewsKarnataka NewsLatest

*ಗೃಹಲಕ್ಷ್ಮಿ ಯೋಜನೆಗೆ ಕೋಟಿ ನೋಂದಣಿ: ಲಕ್ಷ್ಮೀ ಹೆಬ್ಬಾಳಕರ್ ಹರ್ಷ*

*ಪ್ರಗತಿವಾಹಿನಿ ಸುದ್ದಿ, ಬೆಂಗಳೂರು; ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಇದುವರೆಗೂ ಒಂದು ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಜುಲೈ 19 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಬಳಿಕ ಜುಲೈ 20ರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿತ್ತು. ಒಟ್ಟು1.28 ಕೋಟಿ ಫಲಾನುಭವಿಗಳಿದ್ದು, ನೋಂದಣಿ ಪ್ರಕ್ರಿಯೆ ಆರಂಭಗೊಂಡ 15 ದಿನಗಳಲ್ಲೇ ಕೋಟಿಗೂ ಅಧಿಕ ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರು ಓನ್, ಕರ್ನಾಟಕ ಓನ್, ಬಾಪೂಜಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಮಹಿಳೆಯರು ಯಾವುದೇ ಶುಲ್ಕ ನೀಡದೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.

* ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಸ; 

ಕೇವಲ 15 ದಿನಗಳಲ್ಲಿ ಕೋಟಿಗೂ ಅಧಿಕ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸಂಸತ ವ್ಯಕ್ತಪಡಿಸಿದ್ದಾರೆ.  ಇದೇ  ಆಗಸ್ಟ್ 16 ಅಥವಾ 20 ರಂದು ಬೆಳಗಾವಿಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ  ಫಲಾನುಭವಿಗಳ ಬ್ಯಾಂಕ್ ಖಾತೆಗೆ 2000 ರೂಪಾಯಿ ಜಮಾ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

Home add -Advt

Related Articles

Back to top button