Karnataka NewsLatestPolitics

*ಅಡ್ಡ ಮತದಾನ ಬಿಜೆಪಿಗೆ ಎಚ್ಚರಿಕೆಯ ಗಂಟೆ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನವರು ದೊಡ್ಡ ಪ್ರಮಾಣದ ಹಣದ ಆಮಿಷ ಒಡ್ಡಿದ್ದರಿಂದ ಕೆಲವರು ಅಡ್ಡ ಮತದಾನ ಮಾಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆ. ಈ ಥರದ ಮುಖ್ಯಮಂತ್ರಿ ಇದ್ದಾಗ ಬಹಳ ಜಾಗೃತೆಯಿಂದ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.


ಅವರು ಇಂದು ಇಂದು ಬೆಳಗಾವಿಯ ನ್ಯೂ ಗೂಡ್ಸ್ ಶೆಡ್ ರಸ್ತೆಯಲ್ಲಿ ಜನಕಲ್ಯಾಣ ಟ್ರಸ್ಟ, ಬೆಳಗಾವಿ ಇವರ ವತಿಯಿಂದ ನಿರ್ಮಿಸಲಾದ ಶ್ರೀ ಜಗನ್ನಾಥರಾವ್ ಜೋಶಿ ಸ್ಮಾರಕ ಭವನದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡ್ಡ ಮತದಾನದ ತನಿಖೆ ನಡೆಸಲು ಪಕ್ಷದ ವತಿಯಿಂದ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ. ಈ ಥರದ ಮುಖ್ಯಮಂತ್ರಿ ಇದ್ದಾಗ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.


ಕೆ ಎಲ್ ಇ ಸಂಸ್ಥೆಯ ಅಧ್ಯಕ್ಷರಾಗಿರುವ ಪ್ರಭಾಕರ ಕೋರೆಯವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಭಾಕರ ಕೋರೆಯವರು ಕೆಎಲ್ ಇ ಸಂಸ್ಥೆಯ ಮೂಲಕ ಉತ್ತರ ಕರ್ನಾಟಕ ಅಭಿವೃದ್ದಿಗೆ ಅವರು ನೀಡಿದ ಕೊಡುಗೆಯನ್ನು ನೋಡಿ ಈ ಗೌರವ ನೀಡಲಾಗಿದೆ. ಅವರಿಗೆ ಅಭಿನಂದನೆಗಳು ಎಂದು ಹೇಳಿದರು.

Home add -Advt

Related Articles

Back to top button