Karnataka NewsLatestPolitics

*ಅಡ್ಡ ಮತದಾನ: ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್​​ ಚುನಾವಣೆಯಲ್ಲಿ ಬಿಜೆಪಿ ಕೆಲ ಶಾಸಕರು ಅಡ್ಡಮತದಾನದ ಮಾಡಿರುವ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪಕ್ಷಕ್ಕೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಲ್ಲ, ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಖಿಸಿದ್ದರು. ಇದರ ಬೆನ್ನಲ್ಲೇ ಅಡ್ಡ ಮತದಾನ ತನಿಖೆಗೆ ರಾಜ್ಯ ಬಿಜೆಪಿ ಸತ್ಯಶೋಧನಾ ಸಮಿತಿ ರಚನೆ ಮಾಡಿದೆ.

ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ನೇತೃತ್ವದಲ್ಲಿ ಸತ್ಯ ಶೋಧನಾ ಸಮಿತಿ ರಚನೆ ಮಾಡಲಾಗಿದ್ದು, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಎನ್​.ಮಹೇಶ್, ಶಾಸಕ ಮಹೇಶ್ ಟೆಂಗಿನಕಾಯಿ ಒಳಗೊಂಡ ತ್ರಿಸದಸ್ಯ ಸಮಿತಿ ಇದಾಗಿದೆ. ಜೂನ್ 25ರೊಳಗೆ ವರದಿ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮಿತಿ ಸದಸ್ಯರಿಗೆ ಸೂಚನೆ ನೀಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button