
ಪ್ರಗತಿವಾಹಿನಿ ಸುದ್ದಿ; ಸಿಆರ್ ಪಿಎಫ್ ಯೋಧರೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.
ರವಿಶಂಕರ್ ಎಂ.ಆರ್ (39) ಮೃತ ಯೋಧ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವನ್ನಪ್ಪಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ರವಿಶಂಕರ್ ಜಮ್ಮುನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇತ್ತು. ಅರಸಿಕೆರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಯೋಧನ ವರದಿ ಸಂಗ್ರಹಕ್ಕಾಗಿ ಒಂದು ವಾರದ ಹಿಂದೆ ಹೊಳೆನರಸೀಪುರಕ್ಕೆ ರವಿಶಂಕರ್ ಬಂದಿದ್ದರು. ಇಂದು ಕರ್ತವ್ಯಕ್ಕೆ ತೆರಳಬೇಕಿದ್ದ ರವಿಶಂಕರ್ ಅವರಿಗೆ ಶುಕ್ರವಾರ ಇದ್ದಕ್ಕಿದ್ದಂತೆ ತೀವ್ರ ಜ್ವರ ಕಾಣಿಸಿಕೊಂಡಿದೆ.
ತಕ್ಷಣ ಅವರನ್ನು ಹೊಳೆನರಸೀಪುರ ತಾಲೂಕು ಆಸ್ಪತ್ರೆಗೆ ಕರೆದಿಯ್ಯಲಾಗಿತ್ತು. ವೈದ್ಯರು ಕೆಲ ಮಾತ್ರೆಗಳನ್ನು ಬರೆದುಕೊಟ್ಟಿದ್ದರು. ಮನೆಗೆ ವಾಪಾಸ್ ಆದ ರವಿಶಂಕರ್ ಏಕಾಏಕಿ ಸಾವನ್ನಪ್ಪಿದ್ದಾರೆ. ಸರಿಯಾಗಿ ಚಿಕಿತ್ಸೆ ನೀಡದೇ ನಿರ್ಲಕ್ಷ ಮಾಡಿರುವ ವೈದ್ಯರೇ ಯೋಧನ ಸಾವಿಗೆ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊಳೆನರಸೀಪುರ ನಗರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ