
ಪ್ರಗತಿವಾಹಿನಿ ಸುದ್ದಿ: ಸಿಆರ್ ಪಿ ಎಫ್ ಯೋಧರೊಬ್ಬರು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ.
ಮೃತ ಯೋಧನನ್ನು ಮಹಾರಾಷ್ಟ್ರ ಮೂಲದ ಪ್ರವೀಣ್ ಪಾಟೀಲ್ ಎಂದು ಗುರುತಿಸಲಾಗಿದೆ. ಬೆಳಿಗ್ಗೆಯಷ್ಟೇ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಟಿಕ್ರಿ ಪ್ರದೇಶದಲ್ಲಿ ರಸ್ತೆ ಉದ್ಘಾಟನಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಬಳಿತ ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಯೋಧನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ