*ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯೋಧ*
ಪ್ರಗತಿವಾಹಿನಿ ಸುದ್ದಿ: ಸಿಆರ್ ಪಿ ಎಫ್ ಯೋಧರೊಬ್ಬರು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ಯೋಧನನ್ನು ಮಹಾರಾಷ್ಟ್ರ ಮೂಲದ ಪ್ರವೀಣ್ ಪಾಟೀಲ್ ಎಂದು ಗುರುತಿಸಲಾಗಿದೆ. ಬೆಳಿಗ್ಗೆಯಷ್ಟೇ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಟಿಕ್ರಿ ಪ್ರದೇಶದಲ್ಲಿ ರಸ್ತೆ ಉದ್ಘಾಟನಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಬಳಿತ ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯೋಧನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. … Continue reading *ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯೋಧ*
Copy and paste this URL into your WordPress site to embed
Copy and paste this code into your site to embed