Kannada NewsKarnataka NewsLatest

*BREAKING: ಕಬ್ಬನ್ ಪಾರ್ಕ್ ನಲ್ಲಿಯೇ ನೇಣಿಗೆ ಶರಣಾದ ಯುವಕ*

ಪ್ರಗತಿವಾಹಿನಿ ಸುದ್ದಿ: ಕಬ್ಬನ್ ಪಾರ್ಕ್​ನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಎರಡು ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಇಂದು ಬೆಳಿಗ್ಗೆ ಕಬ್ಬನ್ ಪಾರ್ಕ್ ನಲ್ಲಿ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ.

ಯುವಕ ನಾಪತ್ತೆಯಾದ ಬಗ್ಗೆ ಕುಟುಂಬದವರು ಹೆಚ್​ಎಸ್ಆರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇಂದು ಬೆಳಗ್ಗೆ ಕಬ್ಬನ್ ಪಾರ್ಕ್‌ನ ಮರೊಂದಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸುರೇಶ್ ಶವ ಪತ್ತೆಯಾಗಿದೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ಕಬ್ಬನ್ ಪಾರ್ಕ್​ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಮೃತನ ಜೇಬಿನಲ್ಲಿ ಐಡಿ ಕಾರ್ಡ್​ ಲಭಿಸಿದ್ದು, ಆತ ಬೆಂಗಳೂರಿನ ಎಸ್​ಪಿ ರೋಡ್​ನಲ್ಲಿರುವ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

https://pragativahini.com/tadiyandamol-bettakodagutreckinggirlmissing

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button