Film & Entertainment

*ಕಲ್ಟ್ ಸಿನಿಮಾ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ನಾಯಕ ನಟನಾಗಿ ಅಭಿನಯಿಸುತ್ತಿರುವ ‘ಕಲ್ಟ್’ ಚಿತ್ರದ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಡ್ರೋನ್ ಟೆಕ್ನಿಷಿಯನ್. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ್ ಸಹೋದರಿ ಮಗದಿ ಪೊಲೀಸ್ ಠಾಣೆಯಲ್ಲಿ ಚಿತ್ರತಮ್ದದ ವಿರುದ್ಧ ದೂರು ನೀಡಿದ್ದು, ಚಿತ್ರತಂಡಕ್ಕೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಸಂತೋಷ್ ಸಿನಿಮಾಗೆ ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದರು. ಈ ಹಿಂದೆಸಂತೋಷ್, ಮಾರ್ಟಿನ್, ಯುವ ಸಿನಿಮಾಗಳಲ್ಲಿ ಕೆಲಸ ಮಾಡಿದ್ದ ಅನುಭವ ಹೊಂದಿದ್ದಾರೆ. ನ.25ರಿಂದ ಚಿತ್ರದುರ್ಗದಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಒಂದು ದಿನಕ್ಕೆ 25 ಸಾವಿರ ರೂಪಾಯಿ ನಿಗದಿ ಮಾಡಿ ಶೂಟ್ ಮಡುತ್ತಿದ್ದರು. ಶೂಟಿಂಗ್ ವೇಳೆ ವಿಂಡ್ ಫ್ಯಾನ್ ಗೆ ಟಚ್ ಆಗಿ ಡ್ರೋನ್ ತುಂಡಾಗಿದೆ. ಇದಾದ ಬಳಿಕ ಚಿತ್ರತಂದ ಸಂತೋಷ್ ಗೆ ಕೊಂಚವೂ ನಂಷ್ಟ ತುಂಬಿಕೊಟ್ಟಿಲ್ಲ. ಸಂತೋಷ್ ಚಿತ್ರತಂದಕ್ಕೆ ಕೇಳಿಕೊಂಡಿದ್ದಾರೆ. ಈ ವೇಳೆ ಒಂದುವರೆ ಲಕ್ಷ ರೂ ಬೆಲೆಬಾಳುವ ಮೆಮೊರಿ ಕಾರ್ಡ್ ಕಿತ್ತುಕೊಂಡು ಕಳುಹಿಸಿದ್ದಾರಂತೆ.

ಇದರಿಂದ ಮನನೊಂದು ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button