
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಕೆಎಲ್‌ಇ ಸಂಸ್ಥೆಯ ರಾಜಾ ಲಖಮಗೌಡ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಪಠ್ಯದ ಜೊತೆಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂಚೂಣಿಯ ಸ್ಥಾನದಲ್ಲಿ ದಾಪುಗಾಲಿಟ್ಟಿದೆ.
ಬೆಳಗಾವಿಯ ಗೋಗಟೆ ತಾಂತ್ರಿಕ ಮಹಾವಿದ್ಯಾಲಯ ಶನಿವಾರ ಆಯೋಜಿಸಿದ್ದ ಔರಾ ಉತ್ಸವದ ಫ್ಯೂಜನ್ ಡ್ಯಾನ್ಸ್’ ಸ್ಪರ್ಧೆಯಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಕಾದಂಬರಿ ಪಾಟೀಲ, ಸೇಜಲ್ ಕಾಟ್ಕರ್, ಅಪರ್ಣಾ ಹರೇರ, ರಿತಿಕಾ ಭಾತಕಾಂಡೆ, ಸ್ನೇಹಾ ತಿಪ್ಪಣ್ಣವರ, ನಿವೇದಿತಾ ಇಂಗಳಗಿ, ಶ್ರೀಷಾ ಹಾವಳ, ನೇಹಾ ಪಾಟೀಲ ‘ಫ್ಯೂಜನ್ ಡ್ಯಾನ್ಸ್’ ಸ್ಪರ್ಧೆಯಲ್ಲಿ ರನ್ನರ್ಸ್ ಅಪ್ ಸ್ಥಾನ ಪಡೆದು ಪ್ರಶಂಸೆಗೆ ಪಾತ್ರರಾಗಿದ್ದಾರೆ.
ವಿದ್ಯಾರ್ಥಿಗಳ ಸಾಂಸ್ಕೃತಿಕ ಸಾಧನೆಗೆ ಕೆ ಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರು, ಆಡಳಿತ ಮಂಡಳಿ ಸರ್ವಸದಸ್ಯರು, ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಮಹಾವಿದ್ಯಾಲಯದ ಪ್ರಾಚಾರ್ಯ ವಿಶ್ವನಾಥ ಸಿ.ಕಾಮಗೋಳ, ಕೆಎಲ್ ಇ ಸಂಸ್ಥೆಯ ಅಜೀವ ಸದಸ್ಯರಾದ ಎಸ್.ಜಿ.ನಂಜಪ್ಪನವರ, ಮಹಾವಿದ್ಯಾಲಯದ ಉಪಪ್ರಾಚಾರ್ಯ ಡಾ.ಎಸ್.ಎ.ಜವಳಿ, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ ವೃಂದದವರು ಅಭಿನಂದಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ