
ಪ್ರಗತಿವಾಹಿನಿ ಸುದ್ದಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ತಡರಾತ್ರಿ 12 ಗಂಟೆಯಿಂದಲೇ ಸೆ.25ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ.
ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ಹತ್ತು ಹಲವು ಆಕರ್ಷಣೆಗಳು ಜನರನ್ನ ಕೈಬೀಸಿ ಕರೆಯುತ್ತಿವೆ.