Latest

*ಆಟವಾಡುತ್ತ ವಿದ್ಯುತ್ ತಂತಿ ಹಿಡಿದ ಮಕ್ಕಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಆತವಾಡುತ್ತಿದ್ದ ಇಬ್ಬರು ಮಕ್ಕಳಿಗೆ ಮನೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

14 ವರ್ಷದ ನಿತೀಶ್ ಹಾಗೂ 13 ವರ್ಷದ ಪ್ರಜ್ವಲ್ ಮೃತ ಬಾಲಕರು. ಮನೆ ಮೇಲೆ ಹೈ ಟೆನ್ಶನ್ ವಿದ್ಯುತ್ ತಂತಿ ಹಾದು ಹೋಗಿದ್ದು, ಆಟವಾಡುತ್ತ ಓರ್ವ ಬಾಲಕ ವಿದ್ಯುತ್ ತಂತಿಯನ್ನು ಹಿಡಿದಿದ್ದಾನೆ. ಇದೇ ವೇಳೆ ಇನ್ನೋರ್ವ ಬಾಲಕ ಆತನನ್ನು ಬಿಡಿಸಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಇಬ್ಬರೂ ಬಾಲಕರು ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ.

ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

https://pragati.taskdun.com/balaji-sugersit-raidvijayapura/


Related Articles

Back to top button