Kannada NewsKarnataka NewsLatest

*ಮಹಿಳಾ ಕಸ್ಟಮ್ಸ್ ಅಧಿಕಾರಿ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್ ಪ್ರಕರಣ: ಸ್ಫೋಟಕ ಮಾಹಿತಿಗಳು ಬಹಿರಂಗ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಕಸ್ಟಮ್ಸ್ ಅಧಿಕಾರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪುಲಿಕೇಶಿನಗರ ಪೊಲೀಸರಿಂದ ಬಂಧಿತನಾಗಿರುವ ಕೃಪಲಾನಿ ವಿಚಾರಣೆ ವೇಳೆ ಸ್ಫೋಟಕ ಅಂಶಗಳನ್ನು ಬಯಬಿಟ್ಟಿದ್ದಾನೆ.

ಈತ ಕೇವಲ ಒಬ್ಬರನ್ನಲ್ಲ, ಸುಮಾರು 50ಕ್ಕೂ ಹೆಚ್ಚು ಮಹಿಳಾ ಅಧಿಕಾರಿಗಳನ್ನು ಇದೇ ರೀತಿ ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಮಹಿಳಾ ಅಧಿಕಾರಿಗಳ ಜತೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ ಮಾಡಿ ನಂತರ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ. ಆ ಮೂಲಕ ತನ್ನ ಕುಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದ.

Home add -Advt

ಆರೋಪಿ ಕೃಪಲಾನಿ ಮುಖ್ಯವಾಗಿ ಜಿಎಸ್‌ಟಿ ಮತ್ತು ಕಸ್ಟಮ್ಸ್ ವಿಭಾಗದ ಮಹಿಳಾ ಅಧಿಕಾರಿಗಳನ್ನು ಟಾರ್ಗೆಟ್ ಮಾಡುತ್ತಿದ್ದ. ಆರಂಭದಲ್ಲಿ ಕೆಲಸದ ನಿಮಿತ್ತ ಅಧಿಕಾರಿಗಳೊಂದಿಗೆ ಸಲುಗೆ ಬೆಳೆಸುತ್ತಿದ್ದ ಈತ, ಬಳಿಕ ಡಿನ್ನರ್, ಲಂಚ್ ಎಂದು ಆಪ್ತನಾಗುತ್ತಿದ್ದ. ನಂತರ ಪ್ರೀತಿ ಮತ್ತು ಮದುವೆಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸುತ್ತಿದ್ದ. ಅಷ್ಟಕ್ಕೇ ಸುಮ್ಮನಾಗದೆ, ಆ ದೈಹಿಕ ಸಂಪರ್ಕವನ್ನೇ ಬಂಡವಾಳವಾಗಿಸಿಕೊಂಡು ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸುತ್ತಿದ್ದ. ಅಧಿಕಾರಿಗಳ ಕಾರ್ಯವೈಖರಿ ಮತ್ತು ಇಲಾಖೆಯ ಒಳಗಿನ ಲೋಪದೋಷಗಳನ್ನು ತಿಳಿದುಕೊಳ್ಳುತ್ತಿದ್ದ ಎಂದು ತಿಳಿದಿಬಂದಿದೆ.

ಇನ್ನು ಆರೋಪಿ ಕೃಪಲಾನಿ, ಮೆಡಿಕಲ್ ಟೆಸ್ಟ್ ಮಾಡಿಸುವ ವೇಳೆ ಆಸ್ಪತ್ರೆಯಲ್ಲಿ ರಂಪಾಟ ಮಾಡಿದ್ದು, ಪೊಲೀಸರ ಮೊಬೈಲ್ ಕಸಿದುಕೊಂಡು ಅವಾಚ್ಯವಾಗಿ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ವಿ.ವಿ. ಪುರಂ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.


Related Articles

Back to top button