Kannada NewsKarnataka NewsLatest

*ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಡೆ ಸಿಐಡಿ ಸೈಬರ್ ಕ್ರೈಂ ಅಧಿಕಾರಿಗಳ ದಾಳಿ*

13 ಆರೋಪಿಗಳು ಅರೆಸ್ಟ್


ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಸಿಐಡಿ ಸೈಬರ್ ಕ್ರೈಂ ಅಧಿಕಾರಿಗಳು ನೂರಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಬೃಹತ್ ಸೈಬರ್ ವಂಚನೆ ದಂಧೆಯನ್ನು ಸಿಐಡಿ ಸೈಬರ್ ಕ್ರೈಂ ವಿಭಾಗದ ಅಧಿಕಾರಿಗಳು ಭೇದಿಸಿದ್ದು, 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್​ಗಗಳನ್ನು ಪತ್ತೆ ಮಾಡಲಾಗಿದೆ. 13 ಮಾಸ್ಟರ್ ಮೈಂಡ್ ಗಳನ್ನು ಬಂಧಿಸಲಾಗಿದೆ.

ಅಮಾಯಕ ಜನರ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಹಾಗೂ ಖಾತೆ ವಿವರಗಳನ್ನು ಹಣಕ್ಕಾಗಿ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡಲಾಗುತ್ತಿತ್ತು. ಮ್ಯೂಲ್ ಅಕೌಂಟ್‌ಗಳ ಮೂಲಕ ವಂಚಕರು ಆನ್‌ಲೈನ್ ವಂಚನೆ ನಡೆಸಿ ಹಣ ವರ್ಗಾವಣೆ ಹಾಗೂ ಎಟಿಎಂ ಮೂಲಕ ಹಣ ವಿತ್‌ಡ್ರಾ ಮಾಡಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button