*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತದ ಅಬ್ಬರ ತಗ್ಗುತ್ತಿದ್ದಂತೆ ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡು ಚಂಡಮಾರುತ ಸೃಷ್ಟಿಯಾಗಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು,ಚಾಮರಾಜನಗರ, ಕೋಲಾರ, ಕೊಡಗು, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರ … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*