Latest

ಭೀಕರ ಚಂಡಮಾರುತ; 80 ಜನರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ವಾಷಿಂಗ್ಟನ್: ಅಮೆರಿಕಾದಲ್ಲಿ ಭೀಕರ ಚಂಡಮಾರುತ ಬೀಸುತ್ತಿದ್ದು, 80ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ ನೂರಾರು ಜನರು ನಾಪತ್ತೆಯಾಗಿದ್ದಾರೆ.

ಅಮೆರಿಕಾದ ಐದು ರಾಜ್ಯಗಳಲ್ಲಿ ಚಂಡಮಾರು ಅಪ್ಪಳಿಸಿದೆ. ಈ ಕುರಿತು ಮಾತನಾಡಿರುವ ಅಧ್ಯಕ್ಷ ಜೊ ಬಿಡನ್, ಇದು ಇತಿಹಾಸದ ಅತಿದೊಡ್ಡ ಚಂಡಮಾರುತಗಳಲ್ಲಿ ಒಂದು. ಈವರೆಗೆ 80 ಜನರು ಸಾವನ್ನಪ್ಪಿದ್ದರೆ. ಎಷ್ಟು ಜನ ನಾಪತ್ತೆಯಾಗಿದ್ದಾರೆ, ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗಬೇಕಿದೆ. ಮನೆ., ಕಚೇರಿ, ಕಾರ್ಖಾನೆಗಳು ಸೇರಿದಂತೆ ವಿವಿಧೆಡೆ ಪರಿಹಾರ ಕಾರ್ಯಾಚರಣೆ ನಡೆದಿದೆ ಎಂದು ಹೇಳಿದ್ದಾರೆ.

ಕೆಂಟಕಿಯೊಂದರಲ್ಲಿಯೇ 70 ಜನರು ಮೃತಪಟ್ಟಿದ್ದಾರೆ. ಅವರಲ್ಲಿ ಹೆಚ್ಚಿನ ಜನ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಕೆಲಸಮಾಡುತ್ತಿದ್ದವರಾಗಿದ್ದಾರೆ. ಇಲಿನಾಯ್ಸ್ ಆಮೆಜಾನ್ ವೇರ್ ಹೌಸ್ ನಲ್ಲಿ ಕನಿಷ್ಠ ಆರು ಜನ ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿದವರನ್ನು ಹುಡುಕುವ ಪ್ರಯತ್ನ ನಡೆದಿದೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button