Latest

*ಸೈಕ್ಲೋನ್ ಎಫೆಕ್ಟ್: ರಾಜ್ಯದ 8 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಆರಂಭ ಆಗಿರುವ ಸೈಕ್ಲೋನ್ ಎಫೆಕ್ಟ್ ಕರ್ನಾಟಕದ ಮೇಲೂ ಪರಿಣಾಮ ಬೀರಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ರಾಜ್ಯದ 8 ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಎರಡು ದಿನ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

Home add -Advt

ವಿಜಯನಗರ, ಶಿವಮೊಗ್ಗ ರಾಮನಗರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಅಲ್ಲದೆ ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಉಂಟಾಗಿದ್ದು, ಮಧ್ಯಾಹ್ನದ ಹೊತ್ತಿಗೆ ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಮಳೆಯಾಗುವ ಸಾದ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button