Belagavi NewsBelgaum NewsKannada NewsKarnataka News
*ಸುಳಗಾದಲ್ಲಿ ಸಿಲಿಂಡರ್ ಬ್ಲಾಸ್ಟ್: ಇಬ್ಬರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲೂಕಿನ ಸುಳಗಾದಲ್ಲಿ ಆಕಸ್ಮಿಕವಾಗಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಗ್ಯಾಸ್ ಸಿಲಿಂಡರ್ ಸ್ಪೋಟ್ ದಿಂದ ಮನೆಯಲ್ಲಿದ್ದ ಕಲ್ಲಪ್ಪ ಪಾಟೀಲ್ (62) ಸುಮನ್ ಪಾಟೀಲ್(60) ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಪೋಟದ ತೀವ್ರತೆಗೆ, ಕಲ್ಲಪ್ಪ ಹಾಗೂ ಸುಮನ್ ಶೇಖಡಾ 70 ರಷ್ಟು ಸುಟ್ಟು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮುಂಜಾನೆ 4 ಗಂಟೆಗೆ ಲೈಟ್ ಸ್ವಿಚ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್ ಬ್ಲಾಸ್ಟ್ ಆಗಿ, ದುರ್ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟದಿಂದ ಟ್ರಜರಿ, ಸಮವಸ್ತ್ರ, ದವಸ ಧಾನ್ಯಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.