Kannada NewsKarnataka News

*ಹುಬ್ಬಳ್ಳಿಯಲ್ಲಿ ನಡೆದ ಸಿಲಿಂಡರ್‌ ಬ್ಲಾಸ್ಟ್ ಪ್ರಕರಣ: ಮತ್ತೋರ್ವ ಮಾಲಾಧಾರಿ ಸಾವು*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ ನಗರದ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ತಗುಲಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 9 ಜನರ ಪೈಕಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇದೀಗ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಡಿ.22 ರಂದು ರಾತ್ರಿ ದೇವರಿಗೆ ಪೂಜೆ ಸಲ್ಲಿಸಿ, ಅಡುಗೆ ಮಾಡಿ ಸೇವಿಸಿದ ಬಳಿಕ ಮಾಲಾಧಾರಿಗಳು ಮಲಗಿದ್ದಾರೆ, ಈ ವೇಳೆ ಗ್ಯಾಸ್ ಸರಿಯಾಗಿ ಆಫ್ ಮಾಡದ ಕಾರಣ ಲೀಕ್ ಆಗಿದೆ. ಪರಿಣಾಮ ಅಲ್ಲೇ ಪಕ್ಕದಲ್ಲಿದ್ದ ದೀಪದ ಬೆಂಕಿಗೆ ತಗುಲಿ ಏಕಾಏಕಿ ಬ್ಲಾಸ್ಟ್ ಆಗಿದೆ.

ಗ್ಯಾಸ್‌ ಸಿಲಿಂಡ‌ರ್ ಬ್ಲಾಸ್ಟ್ ಅದ ಹಿನ್ನಲೆ ಅಲ್ಲೇ ಪಕ್ಕದಲ್ಲಿದ್ದ ಮಲಗಿದ್ದ 9 ಜನ ಅಯ್ಯಪ್ಪಸ್ವಾಮಿಯ ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಶಂಕರ್ ಚೌಹಾಣ್ (29) ಎಂಬುವವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 5 ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button