ಪ್ರಗತಿವಾಹಿನಿ ಸುದ್ದಿ: ಅಡುಗೆ ಸಿಲಿಂಡರ್ ಸ್ಫೊಟಗೊಂಡು 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ನಡೆದಿದೆ.
ಮುನೀರ್ ಸಾಬ್ (65), ಫರೀದಾ ಬಾನು(58), ಸುಲ್ತಾನ್ (18), ಅಲ್ತಾಫ್ (15), ತಮನ್ನಾ(14), ಶಬೀನಾ ಬಾನು (34)ಗಾಯಾಳುಗಳು. ಗಾಯಾಳುಗಳಲ್ಲಿ ಮುನೀರ್ ಸಾಬ್ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿವೆ.
ದಾವಣಗೆರೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ