ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನ ಮನೆಯೊಂದರಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ ದುರ್ಘಟನೆ ನಡೆದಿದ್ದು, ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ. ಇಂದು ಮುಂಜಾನೆ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ.
ಪರಿಣಾಮ ಮಗು ಸೇರಿ ಮನೆಯಲ್ಲಿದ್ದ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ಹಾಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿಗೆ ಸಂಕಷ್ಟ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ