
ಪ್ರಗತಿವಾಹಿನಿ ಸುದ್ದಿ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅನಾಹುತಗಳು ಸಂಭವಿಸುತ್ತಿರುವ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಎರಡು ದಿನಗಳ ಹಿಂದಷ್ಟೆ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಇಂದು ಮತ್ತೊಂದು ಸಿಲಿಂಡರ್ ಸ್ಫೋಟ ಪ್ರಕರಣ ನಡೆದಿದೆ.
ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಓರ್ವ ಬಾಲಕ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಆರ್.ಆರ್.ನಗರದಲ್ಲಿ ಈ ಘಟನೆ ನಡೆದಿದೆ.
ಬಬ್ಲು, ಲಕ್ಷ್ಮಮ್ಮ ಮತ್ತು 9 ವರ್ಷದ ಬಾಲಕ ಗಾಯಗೊಂಡ ದುರ್ದೈವಿಗಳು. ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಛಾವಣಿಗೆ ಹಾಕಿದ್ದ ಸಿಮೆಂಟಿನ ಶೀಟ್ಗಳು ಛಿದ್ರ ಛಿದ್ರವಾಗಿವೆ. ಪೊಲೀಸರು ಗಾಯಾಳುಗಳನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಆರ್.ಆರ್.ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



