*ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟ*: *ಮೂವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಮನೆಯೊಂದರಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅನಾಹುತಗಳು ಸಂಭವಿಸುತ್ತಿರುವ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಎರಡು ದಿನಗಳ ಹಿಂದಷ್ಟೆ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಇಂದು ಮತ್ತೊಂದು ಸಿಲಿಂಡರ್ ಸ್ಫೋಟ ಪ್ರಕರಣ ನಡೆದಿದೆ. ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಓರ್ವ ಬಾಲಕ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಆರ್.ಆರ್.ನಗರದಲ್ಲಿ ಈ ಘಟನೆ ನಡೆದಿದೆ. ಬಬ್ಲು, … Continue reading *ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟ*: *ಮೂವರ ಸ್ಥಿತಿ ಗಂಭೀರ*