ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ರಾಜ್ಯದಲ್ಲಿ ಸಾಲು ಸಾಲು ಅಗ್ನಿ ದುರಂತಗಳು ಸಂಭವಿಸಿದ್ದು, ಆನೇಕಲ್ ನಲ್ಲಿ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 14 ಜನರು ಸಜೀವವಾಗಿ ದಹನಗೊಂಡಿದ್ದಾರೆ. ಈ ಘಟನೆ ಬೆನ್ನಲ್ಲೇ ಇಂದು ಬೆಳಿಗ್ಗೆ ಶಿವಮೊಗ್ಗದ ತೀರ್ಥಹಳ್ಳಿಯ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಮೂವರು ಸಜೀವ ದಹನಗೊಂಡಿದ್ದಾರೆ. ಈ ಘಟನೆ ವೇಳೆಯೇ ಮಂಡ್ಯ ಜಿಲ್ಲೆಯ ಮನ್ ಮುಲ್ ಡೈರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಸಾಲು ಸಾಲು ಬೆಂಕಿ ಅವಘಡ ನಡೆದಿರುವಗಲೇ ಕೊಡಗಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿ ಸಾವನ್ನಪ್ಪಿದ್ದಾರೆ.
ಕುಶಾಲನಗರ ಸಮೀಪದ ತೊಂಡೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ರಮೇಶ್ (48) ಸಾವನ್ನಪ್ಪಿದ್ದಾರೆ.
ರಮೇಶ್ ಅವರ ಪತ್ನಿ ರೂಪಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ರಮೇಶ್ ಕಳೆದ 8 ವರ್ಷಗಳಿಂದ ವಿಕಾಸ್ ಜನಸೇವಾ ಟ್ರಸ್ಟ್ ಮೂಲಕ ವೃದ್ಧಾಶ್ರಮ ನಡೆಸುತ್ತಾ 36 ವೃದ್ಧರಿಗೆ ಆಶ್ರಯ ನೀಡಿದ್ದರು. ಆದರೆ ಈಗ ಸಿಲಿಂಡರ್ ಸ್ಫೋಟಗೊಂಡು ಅವರು ಸಾವನ್ನಪ್ಪಿರುವುದು ದುರಂತ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ