*ಸಿಲಿಂಡರ್ ಸ್ಫೋಟಕ್ಕೆ ಮನೆಯಲ್ಲಿ ಸಂಗ್ರಹಿಸಿದ್ದ ಪಟಾಕಿಗೆ ಹೊತ್ತಿದ ಬೆಂಕಿ: ದಂಪತಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿ ಸಂಗ್ರಹಿಸಿದ್ದ ಪಟಾಕಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ದಂಪತಿ ಸಾವನ್ನಪ್ಪಿದ್ದು, ಪುಟ್ಟ ಮಗಳು ಗಂಭೀರವಗೈ ಗಾಯಗೊಂಡಿರುವ ಘಟನೆ ಹೈದರಾಬಾದ್ ನ ಪಾತಬಸ್ತಿ ಯಾಕುತ್ ಪುರದಲ್ಲಿ ನಡೆದಿದೆ. ಮೋಹನ್ ಲಾಲ್ ಹಾಗೂ ಪತ್ನಿ ಉಷಾ ಮೃತರು. ಮಗಳು ಶೃತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟವಾಗುತ್ತಿದ್ದಂತೆ ಬೆಂಕಿಯ ಕಿಡಿ ಪಟಾಕಿ ಸಂಗ್ರಹದ ಜಾಗದಲ್ಲಿ ಬಿದ್ದಿದ್ದು, ಇಡೀ ಮನೆ ಬೆಂಕಿಯಲ್ಲಿ ಧಗಧಗನೆ ಹೊತ್ತಿ ಉರಿದಿದೆ. ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ … Continue reading *ಸಿಲಿಂಡರ್ ಸ್ಫೋಟಕ್ಕೆ ಮನೆಯಲ್ಲಿ ಸಂಗ್ರಹಿಸಿದ್ದ ಪಟಾಕಿಗೆ ಹೊತ್ತಿದ ಬೆಂಕಿ: ದಂಪತಿ ದುರ್ಮರಣ*