Latest

ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರು ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ಉಡುಪಿ: ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ನೋಡ ನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಅಂಗಡಿ ಹೊತ್ತಿ ಉರಿದಿದ್ದು, ಇಬ್ಬರು ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ಫಕೀರ್ನಕಟ್ಟೆಯಲ್ಲಿ ನಡೆದಿದೆ.

ಗುಜರಿ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಅಲ್ಲಿಯೇ ಇದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಸುತ್ತಮುತ್ತಲಿನ ಪ್ರದೇಶಕ್ಕೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದ್ದು, ಅಂಗಡಿಯಲ್ಲಿದ್ದ ಇಬ್ಬರು ಬೆಂಕಿಗಾಹುತಿಯಾಗಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಬಾಡಿಗೆಗೆ ಇದ್ದ ಶಿಕ್ಷಕಿಯನ್ನೆ ಪ್ರೀತಿಸಿ ಮದುವೆಯಾದ ಓನರ್; ಕೈ ಕೊಟ್ಟು 2ನೇ ವಿವಾಹವಾಗಿ ಎಸ್ಕೇಪ್

Related Articles

Back to top button