
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬೇಕರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಇಡೀ ಬೇಕರಿ ಸುಟ್ಟು ಕರಕಲಾಗಿದೆ.
ಹಾಸನ ಮೂಲದ ವಿರೂಪಾಕ್ಷ ಎಂಬುವವರಿಗೆ ಸೇರಿದ ಬೇಕರಿಯಾಗಿದೆ. ಮುನವಳ್ಳಿ ಪಟ್ಟಣದ ಕೆಇಬಿ ಸರ್ಕಲ್ ಬಳಿ ಇದ್ದ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಬೇಕರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿ ಸುಟ್ಟು ಕರಕಲಾಗಿವೆ.
ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಹಲವು ವರ್ಷಗಳಿಂದ ಬೇಕರಿ ನಡೆಸುತ್ತಿದ್ದ ವಿರೂಪಾಕ್ಷ ಅವರು ಕೆಲಸ ಮಾಡುವ ವೇಳೆ ಇಂದು ಬೆಳಗ್ಗೆ ಸ್ಪೋಟಗೊಂಡಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಕೆಲಸಗಾರರು ಪಾರಾಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆಸಿದೆ.