Kannada NewsKarnataka NewsLatestNational

*ಮತ್ತೆ ಏರಿಕೆಯಾದ ಸಿಲೆಂಡರ್ ಬೆಲೆ*

ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಮತ್ತೆ 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 ರೂ. ಹೆಚ್ಚಳವಾಗಿದ್ದು, ಜನರಿಗೆ ಮತಷ್ಟು ಬೆಲೆ ಏರಿಕೆಯ ಬಿಸಿ ತಟ್ಟಿದೆ.

ಬೆಲೆ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್ ಮತ್ತು ಉದ್ಯಮಗಳಿಗೆ ಈ ದರ ಏರಿಕೆ ಇನ್ನಷ್ಟು ಆರ್ಥಿಕ ಹೊರೆಯಾಗಿ ಪರಿಣಮಿಸಲಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. 

ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂ.ಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ ಬರೋಬ್ಬರಿ 53.50 ರೂ. ಹೆಚ್ಚಳವಾಗಿದ್ದು, 3,255.50 ಕ್ಕೆ ತಲುಪಿದೆ. ಇದರೊಂದಿಗೆ, 5 ಕೆಜಿ ತೂಕದ ಫ್ರೀ ಟ್ರೇಡ್ ಎಲ್‌ಪಿಜಿ (FTL) ಸಿಲಿಂಡರ್‌ಗಳ ಬೆಲೆಯನ್ನೂ ಸಹ 11 ರೂ.ನಷ್ಟು ಹೆಚ್ಚಿಸಲಾಗಿದ್ದು, ದೆಹಲಿಯಲ್ಲಿ ಇದರ ನೂತನ ದರ 821.50 ರೂ. ಆಗಿದೆ

ಆದರೆ, ಸಾಮಾನ್ಯ ಜನರು ಬಳಸುವ ಗೃಹಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 

ಬೆಂಗಳೂರಿನಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ದರ 46 ರೂ. ಏರಿಕೆಯಾಗಿ, 3,198 ರೂ.ಗೆ ತಲುಪಿದೆ. ಕಳೆದ ತಿಂಗಳು ಕಮರ್ಷಿಯಲ್ ಸಿಲಿಂಡರ್ ದರ 991 ರೂ. ಏರಿಕೆ ಆಗಿ 3,152 ರೂ. ಆಗಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button