
ಪ್ರಗತಿವಾಹಿನಿ ಸುದ್ದಿ: ಕೆಲ ತಿಂಗಳಿಂದ ಕಡಿಮೆಯಾಗಿದ್ದ ವಾಣಿಜ್ಯ ಸಿಲಿಂಡರ್ ಗಳ ದರ ಮತ್ತೆ ದಿಢೀರ್ ಏರಿಕೆಯಾಗಿದೆ.
ಹೋಟೆಲ್ ಗಳು, ರೆಸ್ಟೋರೆಂಟ್ ಗಳಲ್ಲಿ ಬಳಸುವ 19 ಕೆಜಿ ವಾಣಿಜ್ಯ ಸಿಲಿಂಡರ್ ಗಳ ದರ 15.50 ರೂಪಾಯಿಯಷ್ಟು ಏರಿಕೆಯಾಗಿದೆ. ಇಂದಿನಿಂದಲೇ ದರ ಅನ್ವಯವಾಗಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಸಿಲಿಂಡರ್ ದರ 1595.50 ರೂ ಆಗಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ದರ 1669 ರೂ ಆಗಿದೆ. ಕೋಲ್ಕತ್ತಾ ಹಾಗೂ ಚೆನ್ನೈನಲ್ಲಿ 1700 ಹಾಗೂ 1754 ರೂ ಆಗಿದೆ.
ಸದ್ಯ ಗ್ರಹ ಬಳಕೆಗೆ ಬಳಸುವ 14.2 ಕೆಜಿ ಸಿಲಿಂಡರ್ ನಲ್ಲಿ ಯಾವುದೇ ದರ ಬದಲಾವಣೆಯಾಗಿಲ್ಲ. ಹಾಗಾಗಿ ಅಡುಗೆ ಸಿಲಿಂಡರ್ ಗೆ ಈ ದರ ಅನ್ವಯವಾಗಲ್ಲ.