ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬೆಲೆ ಏರಿಕೆ ಬಿಸಿ ನಡುವೆಯೇ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ನೀಡಿದೆ. ಅಡುಗೆ ಅನಿಲ ದರ ಭಾರಿ ಏರಿಕೆಯಾಗಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ.
14.2 ಕೆಜಿ ಗೃಹ ಬಳಕೆ ಸಿಲಿಂಡರ್ ದರ 50 ರೂಪಾಯಿ ಹೆಚ್ಚಳವಾಗಿದೆ. ಈ ಮೂಲಕ ಪ್ರತಿ ಎಲ್ ಪಿಜಿ ಸಿಲಿಂಡರ್ ದರ ಸಾವಿರ ರೂ ಗಡಿ ದಾಟಿದೆ.
ಸಿಲಿಂಡರ್ ದರ ಮಾರ್ಚ್ ನಲ್ಲಿ 50 ರೂಪಾಯಿ ಹೆಚ್ಚಳವಾಗಿತ್ತು. ಇದೀಗ ಮತ್ತೆ 50 ರೂಪಾಯಿ ಹೆಚ್ಚಳವಾಗಿದೆ. ಈ ಮೂಲಕ ದೆಹಲಿಯಲ್ಲಿ ಸಿಲಿಂಡರ್ ದರ 999.50 ರೂ ಆಗಿದೆ.
ಇನ್ನು 19 ಕೆ.ಜಿ ವಾಣಿಜ್ಯ ಬಳಕೆ ಸಿಲಿಂಡರ್ ದರ 2253 ರೂ ಆಗಿದೆ.
ಇಂದಿನ ಚಿನ್ನ-ಬೆಳ್ಳಿ ದರ; ಯಾವ ನಗರದಲ್ಲಿ ಎಷ್ಟು ಬದಲಾವಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ