Politics

*ಜೈಲಧಿಕಾರಿಗಳನ್ನು ಅಮಾನತುಗೊಳಿಸಿ, ದರ್ಶನ್ ನನ್ನು ಬೇರೆ ಕಾರಾಗೃಹಕ್ಕೆ ಸ್ಥಳಂತರಿಸಿ: ಸಿಎಂ ಖಡಕ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.

ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ತಾಕೀತು ಮಾಡಿದ್ದಾರೆ.

ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸಿಎಂ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

Home add -Advt

Related Articles

Back to top button