Kannada NewsKarnataka NewsLatest

*ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಇನ್ಸ್ ಪೆಕ್ಟರ್ ನಿಂದ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ಮದುವೆಯಾಗುವುದಾಗಿ ನಂಬಿಸಿ ಇನ್ಸ್ ಪೆಕ್ಟರ್ ಓರ್ವ ಯುವತಿ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಂತ್ರಸ್ತ ಯುವತಿ ಇನ್ಸ್ ಪೆಕ್ಟರ್ ನ ಕರಾಳ ಮುಖವನ್ನು ಬಯಲು ಮಾಡಿದ್ದಾರೆ. ಡಿ.ಜೆ.ಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್, ಅಲ್ಪಸಂಖ್ಯಾತ ಯುವತಿಯೊಬ್ಬಳನ್ನು ವಿವಾಹವಾಗುವುದಾಗಿ ನಂಬಿಸಿ, ಚಾಟಿಂಗ್, ಡೇಟಿಂಗ್ ನಡೆಸಿ ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತೆ ಹೇಳುವ ಪ್ರಕಾರ ಒಂದು ವರ್ಷದ ಮೂರು ಬಾರಿ ತನ್ನನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಮನೆ ಕೊಡಿಸುತ್ತೇನೆ, ಪಾರ್ಲರ್ ತೆಗೆಸಿಕೊಡುತ್ತೇನೆ ಎಂದು ನಂಬಿಸಿ ತನ್ನ ಮನೆಗೆ ಕರೆದು, ಹೋಟೆಲ್ ಗಳಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.

Home add -Advt

ಈಗ ಮದುವೆ ಬಗ್ಗೆ ಪ್ರಸ್ತಾಪಿಸುತ್ತಿದ್ದಂತೆ ಖಾಸಗಿ ವಿಡಿಯೋ, ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ನಮ್ಮ ವಿಚಾರ ಯಾರಿಗಾದರೂ ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಅಲ್ಲದೇ ಪದೇ ಪದೇ ವಿಡಿಯೋ ಕಾಲ್ ಮಾಡಿ ಹಿಂಸಿಸುತ್ತಿದ್ದಾರೆ ಎಂದು ಸಂತ್ರಸ್ತ ಯುವತಿ ಅಳಲು ತೋಡಿಕೊಂಡಿದ್ದಾರೆ. ಇನ್ಸ್ ಪೆಕ್ಟರ್ ವಿರುದ್ಧ ದೂರು ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದು, ಇದರಿಂದ ಮತ್ತಷ್ಟು ನೊಂದಿರುವ ಸಂತ್ರಸ್ತೆ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.

Related Articles

Back to top button