Latest

ಉಪಚುನಾವಣೆ; ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸಿಂದಗಿ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 74,463 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮುನಗೂಳಿ 49,897 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 3116 ಮತಗಳನ್ನು ಪಡೆದಿದ್ದಾರೆ.

ರಮೇಶ್ ಭೂಸನೂರು ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು, ನಾಯಕರು ಸಿಹಿ ಹಂಚಿ, ಬಣ್ಣ ಹಚ್ಚಿ ಜಯಯಕಾರ ಹಾಕುವ ಮೂಲಕ ಸಂಭ್ರಮಚರಣೆಯಲ್ಲಿ ತೊಡಗಿದ್ದಾರೆ.
ಸಿಂದಗಿಯಲ್ಲಿ ಗೆಲುವಿನತ್ತ ದಾಪುಗಾಲಿಟ್ಟ ಬಿಜೆಪಿ; ಕಾರ್ಯಕರ್ತರ ಸಂಭ್ರಮ

Home add -Advt

Related Articles

Back to top button